×
Ad

ಉಡುಪಿ | ಎಂಜಿಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿ ಉದ್ಘಾಟನೆ

Update: 2025-09-06 15:03 IST

ಉಡುಪಿ, ಸೆ.6: ಉಡುಪಿ ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಸ್ಥಾಪನಾ ಸಮಾರಂಭವು ಬುಧವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ.ಗಾಂವ್ಕರ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ, ಶಿಸ್ತು ಮತ್ತು ಸಮಾಜ ಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು. ಯುವಕರು ದೇಶದ ಭವಿಷ್ಯದ ಕಂಬವಾಗಿರುವುದರಿಂದ ಜವಾಬ್ದಾರಿತನದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಎಂ.ಜಿ.ಎಂ. ಪದವಿ ಕಾಲೇಜು ಪ್ರಾಂಶುಪಾಲೆ ಪ್ರೊ.ವನಿತಾ ಮೈಯ, ಟಿ.ಎಂ.ಎ. ಪೈಸ್ಕಿಲ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ ನಿರ್ದೇಶಕ ಟಿ.ರಂಗ ಪೈ ಹಾಗೂ ಎಂಜಿಎಂ ಕಾಲೇಜಿನ ಉಪಪ್ರಾಂಶುಪಾಲ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಎಂ.ವಿಶ್ವನಾಥ್ ಪೈ ಮತ್ತು ಬಿಕಾಂ/ಬಿಬಿಎ ಸಂಯೋಜಕಿ ಡಾ.ಮಲ್ಲಿಕಾ ಎ.ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಪಾಲನ ಮಂಡಳಿಯ ಸದಸ್ಯರು ಪ್ರತಿಜ್ಜಾ ವಿಧಿ ಸ್ವೀಕರಿಸಿದರು. ವಿದ್ಯಾರ್ಥಿಗಳಾದ ಧೀರಜ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಕ್ಯಾರನ್ ಲಿಸಾ ವಂದಿಸಿದರು. ಮಧುರ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News