×
Ad

ಉಡುಪಿ: ರಸ್ತೆ ಬದಿ ನಿಂತಿದ್ದ ಲಾರಿಗೆ ಮಿನಿ ಬಸ್ ಢಿಕ್ಕಿ; ತಮಿಳುನಾಡಿನ 17 ಮಂದಿಗೆ ಗಾಯ

Update: 2024-11-03 09:44 IST

ಕಾಪು: ಮಿನಿ ಬಸ್ ಮತ್ತು ಲಾರಿ ಮಧ್ಯೆ  ಸಂಭವಿಸಿದ ಅಪಘಾತದಲ್ಲಿ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಹೊರಟಿದ್ದ ತಮಿಳುನಾಡಿನ 17 ಮಂದಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆಯಿಂದ ಕೊಲ್ಲೂರು ದೇವಾಲಯಕ್ಕೆ ಹೋಗುತ್ತಿದ್ದ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ  17 ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ

ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು  ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದ್ದು,  ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News