Udupi | ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ: ಏಳು ಪ್ರಯಾಣಿಕರು ಪಾರು

Update: 2026-08-20 10:04 IST

ಉಡುಪಿ, ಆ.20: ಚಲಿಸುತ್ತಿದ್ದ ಖಾಸಗಿ ಬಸ್ಸೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಬಸ್ ಬೆಂಕಿಗಾಹುತಿಯಾದ ಘಟನೆ ಗುರುವಾರ ಬೆಳಗ್ಗೆ ಬ್ರಹ್ಮಾವರದ ಉಪ್ಪೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಈ ವೇಳೆ ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಉಪ್ಪೂರು ಸಮೀಪ ತಲುಪಿದಾಗ ಅದರ ಇಡಿಸಿ ಬಾಕ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ, ಚಾಲಕ ಬಸ್ಸನ್ನು ನಿಲ್ಲಿಸಿ, ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕ, ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿಯಿಂದ ಬಸ್ಸಿಗೆ ಹಾನಿಯಾಗಿದ್ದು, ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News