×
Ad

ಉಡುಪಿ: ಅಪರಿಚಿತ ವ್ಯಕ್ತಿಯ ಹತ್ಯೆ

Update: 2023-10-17 14:21 IST

ಘಟನಾ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು

ಉಡುಪಿ ಆ.17: ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಕಡಿದು ಕೊಲೆ ಮಾಡಿರುವ ಘಟನೆ ನಗರದ ಕರಾವಳಿ ಬೈಪಾಸ್ ಬಳಿ ನಡೆದಿದೆ.

ಸ್ಥಳೀಯವಾಗಿ ಗುಜರಿ ಹೆಕ್ಕುತ್ತಿದ್ದ ಈ ವ್ಯಕ್ತಿಯನ್ನು ದುಷ್ಕರ್ಮಿಗಳು ಕಳೆದ ರಾತ್ರಿ ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇಂದು ಬೆಳಗ್ಗೆ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಉಡುಪಿ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ, ಡಿವೈಎಸ್ಪಿ ದಿನಕರ್ ಹಾಗೂ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಮೃತದೇಹವನ್ನು ಮಣಿಪಾಲ ಕೆಎಂಸಿ ಶವಾಗಾರಕ್ಕೆ ಸಾಗಿಸಲು ಪೊಲೀಸರಿಗೆ ಸಹಕರಿಸಿದರು. ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಹಾಗೂ ರಾಮದಾಸ್ ಪಾಲನ್ ಕಾನೂನು ಪ್ರಕ್ರಿಯೆಗೆ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News