×
Ad

ಉಡುಪಿ | ಕತ್ತು ಸೀಳಿ ಯುವಕನ ಹತ್ಯೆ: ಆರೋಪಿಯ ಬಂಧನ

Update: 2024-10-22 13:17 IST

ಉಡುಪಿ, ಅ.22: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ.

ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ರಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯ ಎಸಗಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ.

ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದಂತೆ ಕಂಡುಬಂದರೂ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News