ಉಡುಪಿ: ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
Update: 2024-12-20 20:09 IST
File Photo
ಉಡುಪಿ, ಡಿ.20: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಡಿಸೆಂಬರ್ 31 ರವರೆಗೆ ಬೆಳಗ್ಗೆ 10ರಿಂದ ಸಂಜೆ 5:00 ಗಂಟೆಯವರೆಗೆ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆಯುವ ಬಗ್ಗೆ ಲಾಗಿನ್ ನೀಡಿದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.