×
Ad

ಉಡುಪಿ | ಡಿ.23ರಂದು ರಾಷ್ಟ್ರೀಯ ರೈತ ದಿನಾಚರಣೆ

Update: 2025-12-22 19:25 IST
ಸಾಂದರ್ಭಿಕ ಚಿತ್ರ | PC : GROK

ಉಡುಪಿ, ಡಿ.22: ಉಡುಪಿ ಜಿಲ್ಲಾ ರೈತ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಮತ್ತು ಸಾಧಕ ರೈತರಿಗೆ ಸನ್ಮಾನ ಕಾರ್ಯಕ್ರಮ ಡಿ.23ರ ಮಂಗಳವಾರ ಬೆಳಗ್ಗೆ 9:30ಕ್ಕೆ ಬ್ರಹ್ಮಗಿರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ.

ರೈತ ದಿನಾಚರಣೆಯನ್ನು ಉದ್ಘಾಟಿಸುವ ಕೃಷಿ ನೀತಿ ಚಿಂತಕರಾದ ಮೈಸೂರಿನ ಸುರೇಶ ಕಂಜರ್ಪಣೆ ಅವರು ‘ರೈತರು ಮತ್ತು ಕೃಷಿಯ ಸಂಕಟಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪ್ಚಂದ್ರ ಶೆಟ್ಟಿ ಅದ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಏಳು ಮಂದಿ ಸಾದಕ ರೈತರಿಗೆ ಸನ್ಮಾನ ಹಾಗೂ ರೈತ ಸಹಕಾರಿಗಳಿಗೆ ಸನ್ಮಾನ ನಡೆಯಲಿದೆ ಎಂದು ಉಡುಪಿ ಜಿಲ್ಲಾ ರೈತ ಸಂಘದ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News