×
Ad

ಉಡುಪಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Update: 2026-01-27 20:56 IST

ಉಡುಪಿ, ಜ.27: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್. ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಚ್.ಅಶೋಕ್, ದೇಶದಲ್ಲಿರುವ ಲಿಂಗ ತಾರತಮ್ಯ, ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಶಿಕ್ಷಣದ ಅರಿವು, ಹೆಣ್ಣು ಮಕ್ಕಳನ್ನು ಉಳಿಸಿ ಬೆಳೆಸಿ ಪೋಷಿಸುವ ಕುರಿತು ವಿವರವಾದ ಮಾಹಿತಿ ನೀಡಿದರು.

ಪ್ರಸೂತಿ ತಜ್ಞೆ ಡಾ.ಕವಿತಾ ಮತ್ತು ಮಕ್ಕಳ ತಜ್ಞ ಡಾ.ಅಮರನಾಥ್ ಶಾಸ್ತ್ರೀ ಹೆಣ್ಣು ಮಕ್ಕಳ ಮಹತ್ವದ ಬಗ್ಗೆ ಮಾತನಾಡಿದರು. ಇದೇ ವೇಳೆ ಇತ್ತೀಚೆಗೆ ಜನಿಸಿದ ಮೂರು ನವಜಾತ ಶಿಶುಗಳಿಗೆ ಕಿಟ್‌ಗಳನ್ನು ಸಹ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್, ಪ್ರಸೂತಿ ತಜ್ಞೆ ಡಾ.ಐಶ್ವರ್ಯ, ಶುಶ್ರೂಷಕ ಅಧೀಕ್ಷಕಿ ಪ್ಲೋರಾ ಡಿ’ಆಲ್ಮೇಡ, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಬಾಣಂತಿಯರು ಉಪಸ್ಥಿತರಿದ್ದರು.

ಆಸ್ಪತ್ರೆಯ ಆಪ್ತ ಸಮಾಲೋಚಕಿ ವಿದ್ಯಾ ಸುವರ್ಣ ಕಾರ್ಯಕ್ರಮ ನಿರೂಪಿಸಿ, ಶುಶ್ರೂಷಕಾಧಿಕಾರಿ ರೇಣುಕ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News