ಉಡುಪಿ : ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಮುಂಬೈ ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮತ್ತು ಒನ್ ಗುಡ್ ಸ್ಟೆಪ್ ಇವರ ಸಹಯೋಗದಲ್ಲಿ ನವಜೀವನ ಲೇ ಕೌನ್ಸಿಲರ್ ಸಮ್ಮಿಲನ ಹಾಗೂ ಎಲ್‌ಪಿಸಿ- 10ನೇ ಬ್ಯಾಚ್ ಉದ್ಘಾಟನಾ ಸಮಾರಂಭವನ್ನು ಆಸ್ಪತ್ರೆಯ ಕಮಲ್ ಎ ಬಾಳಿಗ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿ ತಾಲೂಕು ವಿಮಾ ವೈದ್ಯಕೀಯ ಅಧಿಕಾರಿ ಹಾಗೂ ಮಂಗಳೂರು ಇ.ಎಸ್.ಐ. ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ. ಹೇಮಂತ್ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಮಣಿಪಾಲ ಮಾಧವ ಕೃಪಾ ಸ್ಕೂಲ್‌ನ ನಿವೃತ್ತ ಮುಖ್ಯ ಶಿಕ್ಷಕಿ ಶಶಿಕಲಾ ರಾಜವರ್ಮ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಆಳ್ವಾಸ್ ಸೆಂಟರ್ ಫಾರ್ ವೆಲ್ನೆಸ್ ಟ್ರೈನಿಂಗ್‌ನ ನಿರ್ದೇಶಕಿ ಹಾಗೂ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಮನೋವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ದೀಪಾ ಕೊಠಾರಿ, ‘ಮೊಬೈಲ್ ಮೇಲೆ ಮನಸ್ಸಿನ ಹಿಡಿತ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಸಮಾರಂಭದಲ್ಲಿ ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರಮನೆ, ಡಾ. ಮಾನಸ ಈ.ಆರ್., ಓನಒ ಗುಡ್ ಸ್ಟೆಪ್‌ನ ಸಂಸ್ಥಾಪಕ ಅಮಿತಾ ಪೈ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಉಡುಪಿ ಡಾ.ಎ.ವಿ.ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಹಳೆಯ ಎಲ್‌ಪಿಸಿ ವಿದ್ಯಾರ್ಥಿಗಳ ಪುನರ್‌ಚೇತನ ಕಾರ್ಯಕ್ರಮ ಹಾಗೂ 10ನೇ ಬ್ಯಾಚ್ ಶಿಕ್ಷಾರ್ಥಿಗಳಿಗೆ ಕೌನ್ಸೆಲಿಂಗ್‌ನ ಮೂಲ ತತ್ವಗಳು ಎಂಬ ವಿಷಯದ ಬಗ್ಗೆ ಸೌಜನ್ಯ ಶೆಟ್ಟಿ ಅವರಿಂದ ಉಪನ್ಯಾಸ ನಡೆಯಿತು.

ಕಾರ್ಯಕ್ರಮ ಸಂಯೋಜಕಿ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಸ್ವಾಗತಿಸಿದರು. ಆಪ್ತ ಸಮಾಲೋಚಕಿ ಪದ್ಮ ರಾಘವೇಂದ್ರ ವಂದಿಸಿದರು. ಆಪ್ತ ಸಮಾಲೋಚಕಿ ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು. ನೂರಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor