Udupi : ʼನಿರ್ದಿಗಂತ ಮಕ್ಕಳ ನಾಟಕೋತ್ಸವʼಕ್ಕೆ ಚಾಲನೆ
Update: 2026-01-18 14:55 IST
ಉಡುಪಿ : ನಿರ್ದಿಗಂತ ವತಿಯಿಂದ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಮಕ್ಕಳ ನಾಟಕೋತ್ಸವಕ್ಕೆ ರವಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.
ಬಿಂದು ರಕ್ಷಿದಿ ಅವರ ನಿರ್ದೇಶನದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಂದ ‘ಮೃಗ ಮತ್ತು ಸುಂದರಿ’ ನಾಟಕ ಪ್ರದರ್ಶನಗೊಂಡಿತು. ಅಪರಾಹ್ನ ವರದರಾಜ್ ಬಿರ್ತಿ ರಚಿಸಿ, ರೋಹಿತ್ ಎಸ್.ಬೈಕಾಡಿ ನಿರ್ದೇಶಿಸಿದ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಮಕ್ಕಳಿಂದ ವಿಜ್ಞಾನ ನಾಟಕ ‘ಕ್ಯೂರಿಯಸ್’ ನಾಟಕ ಪ್ರದರ್ಶನ ಗೊಂಡಿತು.
ನಿರ್ದಿಗಂತದ ಸ್ಥಾಪಕರಲ್ಲೊಬ್ಬರಾದ ರಂಗಕರ್ಮಿ ಹಾಗೂ ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.