ಉಡುಪಿ | ವಾರಸುದಾರರಿಗೆ ಸೂಚನೆ
Update: 2025-12-15 22:11 IST
ಉಡುಪಿ, ಡಿ.15: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗಿಡ-ಗಂಟಿಗಳು ಬೆಳೆದಿರುವ ಖಾಲಿ ಜಾಗದಲ್ಲಿ ಡಿ.12ರಂದು ಅಂದಾಜು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತು ಅಸ್ಥಿ ಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಅಜ್ಜರಕಾಡು ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಸಂರಕ್ಷಿಸಿ ಇಡಲಾಗಿದ್ದು, ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರು /ಸಂಬಂಧಿಕರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಮೊ.ನಂ: 9480805445, ಪಿಐ ಮೊ.ನಂ: 9480805408, ಜಿಲ್ಲಾ ನಿಸ್ತಂತು ಕಚೇರಿ ದೂ.ಸಂಖ್ಯೆ: 0820-2526444 ಹಾಗೂ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444ನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.