ಉಡುಪಿ | ಬೀದಿನಾಯಿಗಳ ಹಾವಳಿ ತಡೆಗಟ್ಟಲು ಕ್ರಮಕ್ಕೆ ಸೂಚನೆ
ಸಾಂದರ್ಭಿಕ ಚಿತ್ರ
ಉಡುಪಿ, ಡಿ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಅನುಷ್ಠ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು (ಖಾಸಗಿ ಮತ್ತು ಸರ್ಕಾರಿ), ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಅವರ ಹಾಗೂ ಇನ್ನಿತರ ಸರ್ಕಾರಿ ಸಂಸ್ಥೆಗಳ ಆವರಣದಲ್ಲಿ ವಾಸವಿರುವ ಬೀದಿನಾಯಿಗಳ ಸಂಖ್ಯೆಯ ಮಾಹಿತಿಯನ್ನು ನಗರಸಭೆಗೆ ತುರ್ತಾಗಿ ನೀಡಬೇಕು.
ಈ ಎಲ್ಲಾ ಸಂಸ್ಥೆಗಳಲ್ಲಿ ಬೀದಿನಾಯಿಗಳ ನಿಯಂತ್ರಣ ಮಾಡಲು ಮತ್ತು ಸಂಸ್ಥೆಯ ಆವರಣದ ಸ್ವಚ್ಛತೆಯನ್ನು ಕಾಪಾಡಲು ಆಯಾ ಸಂಸ್ಥೆಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಮಾಹಿತಿಯನ್ನು ನಗರಸಭೆಗೆ ನೀಡಬೇಕು.
ಬೀದಿ ನಾಯಿಗಳ ದತ್ತು ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದ್ದು, ಬೀದಿ ನಾಯಿಗಳನ್ನು ದತ್ತು ಪಡೆಯಲು ಇಚ್ಚಿಸುವ ವ್ಯಕ್ತಿ/ಸಂಸ್ಥೆಗಳಿಗೆ ನಿಯಾಮಾನುಸಾರ ಬೀದಿ ನಾಯಿಗಳನ್ನು ದತ್ತು ನೀಡಲು ಕ್ರಮ ವಹಿಸಲಾಗುವುದು ಎಂದು ನಗರಸಭೆ ಪೌರಾಯಕ್ತರ ಪ್ರಕಟಣೆ ತಿಳಿಸಿದೆ.