×
Ad

ಉಡುಪಿ: ನೀರು ಸೇದುವಾಗ ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದ ಮಗು ಮೃತ್ಯು

Update: 2025-12-16 17:47 IST

ಉಡುಪಿ: ನೀರು ಸೇದುತ್ತಿದ್ದಾಗ ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.

ಒಂದೂವರೆ ವರ್ಷದ ಕೀರ್ತನಾ ಮೃತಪಟ್ಟ ಮಗು.

ಮಗುವಿನ ತಾಯಿ ನಯನಾ ಕರ್ಕಡ ಎಂಬವರು ಮಗುವನ್ನು ಎತ್ತಿಕೊಂಡು ಮನೆ ಸಮೀಪದ ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ಮಗುವಿನ ತಾಯಿ ಹಗ್ಗದ ಸಹಾಯದಿಂದ ಬಾವಿಗೆ ಇಳಿದಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿತ್ತು.

ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪಿಎಸ್‌ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News