×
Ad

ಉಡುಪಿ | ಡಿ.5ರಂದು ಜಿಲ್ಲಾ ರೆಡ್ ಕ್ರಾಸ್ ನಲ್ಲಿ ಒಂದು ದಿನದ ತರಬೇತಿ ಶಿಬಿರ

Update: 2025-12-04 20:54 IST

ಉಡುಪಿ, ಡಿ.4: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ ಶಾಖೆ, ಮಂಗಳೂರು ವಿಶ್ವವಿದ್ಯಾನಿಲಯ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿ ನಾಯಕರುಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಶಿಬಿರ ಮತ್ತು ವಿಶ್ವ ಸ್ವಯಂಸೇವಕರ ದಿನವನ್ನು ನಾಳೆ ಡಿ.5ರಂದು ಬೆಳಗ್ಗೆ 10ಗಂಟೆಗೆ ಅಜ್ಜರಕಾಡಿನ ರೆಡ್ ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ತರಬೇತಿಯಲ್ಲಿ ವಿವಿಧ ಕಾಲೇಜುಗಳ ರೆಡ್ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣೆ ಮತ್ತು ಸಿಪಿಆರ್ ಬಗ್ಗೆ ಮಾಹಿತಿಗಳನ್ನು ತಜ್ಞ ತರಬೇತುದಾರರು ನೀಡಲಿದ್ದಾರೆ ಎಂದು ರೆಡ್ ಕ್ರಾಸ್ ನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News