ಉಡುಪಿ, ನ.21: ಪರ್ಯಾಯ ಶಿರೂರು ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಪಾರುಪತ್ಯೇದಾರ ಶ್ರೀಶ ಭಟ್ ತಮ್ಮ ವೈಯಕ್ತಿಕ ಕಾರಣಗಳಿಂದ ತಮ್ಮ ಹುದ್ದೆಗೆ ನ.9ರಂದು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಶಿರೂರು ಶ್ರೀವೇದವರ್ಧನ ತೀರ್ಥ ಸ್ವಾಮೀಜಿ ಅಂಗೀಕರಿಸಿದ್ದಾರೆ.

ಶಿರೂರು ಮಠದ ಸ್ವಾಮೀಜಿಗಳ ಸಂಚಾರ ಅವಧಿಯಲ್ಲಿ ಮತ್ತು ಈವರೆಗೆ ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಪಾರುಪತ್ಯೇದಾರರಾಗಿ ಶ್ರೀಶ ಭಟ್ ಕರ್ತವ್ಯ ನಿರ್ವಹಿಸಿದ್ದು, ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಅಸಮರ್ಥರೆಂದು ತಿಳಿಸಿ ರಾಜೀನಾಮೆ ನೀಡಿದ್ದಾರೆ ಎಂದು ಶೀರೂರು ಮಠದ ದಿವಾನ ಡಾ.ಉದಯ ಕುಮಾರ ಸರಳತ್ತಾಯ ತಿಳಿಸಿದ್ದಾರೆ.

ಇನ್ನು ಮುಂದೆ ಮಠಕ್ಕೆ ಸಂಬಂಧಿಸಿದ ಯಾವುದೇ ಹಣಕಾಸು ವ್ಯವಹಾರವನ್ನು ಈ ಹಿಂದಿನ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಪಾರುಪತ್ಯೇದಾರ ಶ್ರೀಶ ಭಟ್ ಅವರಲ್ಲಿ ಮಾಡಬಾರದು ಎಂದು ಈ ಮೂಲಕ ಮನವಿ ಮಾಡುತ್ತಿದ್ದೇವೆ. ಹಣಕಾಸು ಮತ್ತು ಸೇವೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಠದ ಸೇವಾ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Contributor - ನಝೀರ್ ಪೊಲ್ಯ/ವಾರ್ತಾಭಾರತಿ

ಉಡುಪಿ ಜಿಲ್ಲಾ ವರದಿಗಾರರು

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು