×
Ad

ಉಡುಪಿ: ಪ್ರಧಾನಿ ಆಗಮನದ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮೃತ್ಯು

Update: 2025-11-30 11:44 IST

ಸಾಂದರ್ಭಿಕ ಚಿತ್ರ | PC : PTI

ಉಡುಪಿ, ನ.30: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸುವ ಸಂಬಂಧ ಬಂದೋಬಸ್ತ್ ಕರ್ತವ್ಯ ನಿರತರಾಗಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ವೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಚಿಕ್ಕಮಗಳೂರಿನ ವಿಜಯ್ ಕುಮಾರ್ ನಾಯ್ಕ ಜಿ.(41) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನೇಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವಿಜಯ ಕುಮಾರ್, ಪ್ರಧಾನಿ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕಾಗಿ ನ.26ರಂದು ಉಡುಪಿಗೆ ಬಂದಿದ್ದರು.

ಕರ್ತವ್ಯದಲ್ಲಿದ್ದ ಇವರು ನ.27ರಂದು ಬೆಳಗ್ಗೆ ವಾಂತಿ ಮಾಡಿಕೊಂಡು, ಉಸಿರಾಟದ ಸಮಸ್ಯೆಗೊಳಗಾದರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಸ್ಥಿತಿಯಲ್ಲಿದ್ದ ಅವರು ನ.29ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ತಿಳಿದುಬಂದಿದೆ.

ವಿಜಯ್ ಕುಮಾರ್ ನಾಯ್ಕ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News