ಉಡುಪಿ | ತ್ರೈಮಾಸಿಕ ಕೆಡಿಪಿ ಸಭೆ ಜೂ.20ಕ್ಕೆ ಮುಂದೂಡಿಕೆ
Update: 2025-05-29 23:07 IST
ಉಡುಪಿ : ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಜೂ.3ರಂದು ನಡೆಯಬೇಕಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ (ಕೆಡಿಪಿ)ಯನ್ನು ಜೂ.20ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ತ್ರೈಮಾಸಿಕ ಕೆಡಿಪಿ ಸಭೆಯು ಜೂ.20ರ ಶುಕ್ರವಾರ ಬೆಳಗ್ಗೆ 11:00ಗಂಟೆಗೆ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.