ಉಡುಪಿ: ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಿಇಓ ಆತ್ಮಹತ್ಯೆ
Update: 2026-08-10 17:16 IST
ಉಡುಪಿ, ಆ.10: ಉಡುಪಿ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ(44) ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್ ನಿವಾಸಿಯಾಗಿರುವ ಇವರು, ಉಡುಪಿ ಕಲ್ಪನಾ ಟಾಕೀಸ್ ಬಳಿ ಇರುವ ಸಾಯಿರಾಜ್ ಸೊಸೈಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಿಇಓ ಆಗಿದೆ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರು ತಮ್ಮ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.