×
Ad

ಉಡುಪಿ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ: ಇಂದು ಸಿಎಂ ಸಭೆ

Update: 2023-10-04 16:05 IST

ಉಡುಪಿ, ಅ.4: ಉಡುಪಿ ಜಿಲ್ಲೆಯಲ್ಲಿನ ಮರಳು, ಕೆಂಪು ಕಲ್ಲು ಹಾಗೂ ಇನ್ನಿತರೇ ವಿಷಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಅ.5ರಂದು ಸಂಜೆ 5ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯಲ್ಲಿ ಕರೆಯಲಾಗಿದೆ.

ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಮತ್ತು ಟೆಂಪೋ ಮುಷ್ಕರದ ಹಿನ್ನೆಲೆಯಲ್ಲಿ ಕರೆಯಲಾದ ಸಭೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉಪಸ್ಥಿತರಿರುವರು. ಅದೇ ರೀತಿ ಸಂಸದರಾದ ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News