ಉಡುಪಿ: ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿದ್ದಾಗ ಹೃದಯಾಘಾತ; ಶಾಲಾ ವಾಹನ ಚಾಲಕ ಮೃತ್ಯು
Update: 2025-08-01 12:22 IST
ಮಣಿಪಾಲ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ ವಾಹನದ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65) ಮೃತಪಟ್ಟವರು.
ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ವಾಹನ ನಿಲ್ಲಿಸಿದ ಚಾಲಕ ಅದೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುವರನ್ನು ಕಂಡು ಎದೆನೋವಿನ ವಿಚಾರವನ್ನು ತಿಳಿಸಿದ್ದಾರೆ. ತಕ್ಷಣ ಅವರನ್ನು ಅಂಬುಲೆನ್ಸ್ ನಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಆದರೆ ಅವರು ಮಾರ್ಗಮಧ್ಯೆದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.