×
Ad

ಉಡುಪಿ | ವಿಜ್ಞಾನ ನಾಟಕ ಸ್ಪರ್ಧೆ : ಕೆ.ಪಿ.ಎಸ್.ಕೊಕ್ಕರ್ಣೆ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Udupi, Science Drama Competition

Update: 2025-11-25 19:27 IST

ಉಡುಪಿ, ನ.25: ಬೆಂಗಳೂರಿನಲ್ಲಿ ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು ಅಭಿನಯಿಸಿದ ನಾಟಕ ‘ಕ್ಯೂರಿಯಸ್’ ದ್ವಿತೀಯ ಅತ್ಯುತ್ತಮ ನಾಟಕ ಪ್ರಶಸ್ತಿ ಪಡೆದು ಕೋಲ್ಕತ್ತಾದಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಗೆ ಆಯ್ಕೆಯಾಗಿದೆ.

ನಾಟಕ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ನವಮಿ ಎಂ.ಶೆಟ್ಟಿ ಶ್ರೇಷ್ಠನಟಿಯಾಗಿ ಆಯ್ಕೆಯಾಗಿದ್ದಾಳೆ. ಶಿಕ್ಷಕ ವರದರಾಜ್ ಬಿರ್ತಿ ಅವರು ರಚಿಸಿರುವ ಈ ನಾಟಕವನ್ನು ರೋಹಿತ್ ಎಸ್.ಬೈಕಾಡಿ ನಿರ್ದೇಶಿಸಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಎಸ್ಡಿಎಂಸಿ ಸಮಿತಿ ಹಾಗೂ ಶಾಲೆಯ ಶಿಕ್ಷಕರು ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News