ಉಡುಪಿ | ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ನಿಟ್ಟೂರು ನಿವಾಸಿ ರಾಮ ಅಮೀನ್(58) ಎಂಬವರು ಮಾನಸಿಕವಾಗಿನೊಂದು ಅ.18ರಂದು ಬೆಳಗ್ಗೆ ಬೆಡ್ರೂಮಿನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ : ಅನಾರೋಗ್ಯದಿಂದ ಬಳಲುತ್ತಿದ್ದ ಆಲೂರು ಗ್ರಾಮದ ಗಣಪತಿ ಶ್ಯಾನುಭೋಗ್(73) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.17ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.