Udupi | ತಿರುಪತಿ ವಿಮಾನ ನಿಲ್ದಾಣದಲ್ಲಿ ಸೇವಾ ಸಂಕಲ್ಪ ಅಭಿಯಾನಕ್ಕೆ ಚಾಲನೆ
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆಯ ನೆನಪಿಗಾಗಿ ನಡೆಯುತ್ತಿರುವ ’ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ತಿರುಪತಿ ವಿಮಾನ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ’ಯಾತ್ರಿ ಸೇವಾ ಅಭಿಯಾನ’ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರ್ನಾಟಕದಿಂದ ಬಂದ ನನಗೆ ಆಂಧ್ರದಲ್ಲಿ, ಅದರಲ್ಲೂ ಗೋವಿಂದನ ಸನ್ನಿಧಿಯಲ್ಲಿ ಪ್ರಧಾನಿಯವರ ಕಾರ್ಯಕ್ರಮ ಉದ್ಘಾಟಿಸುವ ಸೌಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ನಾವು ಪಕ್ಷದಲ್ಲಿ ಮಾಡಿದ ಸೇವೆಯನ್ನು ಭಗವಂತ ನೋಡುತ್ತಾನೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.
ಸೆ.17ರಿಂದ ಅ.17ರವರೆಗೆ ನಡೆಯುವ ಈ ಅಭಿಯಾನವು ’ಜನಸೇವೆ ಯಿಂದ ರಾಷ್ಟ್ರಸೇವೆಯೆಡೆಗೆ’ ಎಂಬ ಸಂಕಲ್ಪದೊಂದಿಗೆ ನಡೆಯುತ್ತಿದೆ.