×
Ad

ಉಡುಪಿ | ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ಹಲ್ಲೆ: ಆಸ್ಪತ್ರೆಗೆ ದಾಖಲು

Update: 2024-09-14 15:55 IST

ಉಡುಪಿ, ಸೆ.14: ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಎಂಬಲ್ಲಿ ತೀವ್ರ ತರಹದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಮೂರೂವರೆ ವರ್ಷ ಪ್ರಾಯದ ಮಗು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ದಾಖಲಾಗಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನೀಡಿರುವ ದೂರಿನಂತೆ ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿಗೆ ಆರೋಗ್ಯ ಸರಿ ಇಲ್ಲ ಎಂದು ಹೇಳಿ ಪೋಷಕರು ಆಸ್ಪತ್ರೆಗೆ ಕರೆದು ಕೊಂಡು ಬಂದಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಮಗುವಿನ ಮೈಮೇಲೆ ತೀವ್ರ ತರಹದ ಗಾಯಗಳು ಕಂಡುಬಂದಿವೆ. ಮಗುವಿನ ಮೇಲಾದ ಗಾಯದ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News