ಉಡುಪಿ| ಸಾಮಾಜಿಕ ಕಾರ್ಯಕರ್ತೆ ಹೆಲೆನ್ ಫೆರ್ನಾಂಡಿಸ್ ನಿಧನ
Update: 2025-12-28 18:54 IST
ಉಡುಪಿ: ಉದ್ಯಾವರ ಗ್ರಾಮದ ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಹೆಲೆನ್ ಫೆರ್ನಾಂಡಿಸ್ ಉದ್ಯಾವರ(64) ರವಿವಾರ ಹೃದಯಾಘಾತದಿಂದ ನಿಧನರಾದರು.
ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಲವಾರು ವರ್ಷ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಹೆಲೆನ್ ಫೆರ್ನಾಂಡಿಸ್ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ. ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸದಸ್ಯೆಯಾಗಿದ್ದು, ಹಲವಾರು ಹುದ್ದೆಗಳನ್ನು ಸಕ್ರಿಯವಾಗಿ ನಿಭಾಯಿಸಿದ್ದಾರೆ. ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಹೆಲೆನ್ ಫೆರ್ನಾಂಡಿಸ್ ಉದ್ಯಾವರ ಚರ್ಚಿನ ವಿವಿಧ ಸಂಘ-ಸಂಸ್ಥೆಗಳಲ್ಲಿ ಮತ್ತು ವಿಶೇಷವಾಗಿ ಪಾಲನ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ಮೃತರು ಮೂವರು ಪುತ್ರರು, ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.