×
Ad

ಉಡುಪಿ | ತೋಟಗಾರಿಕೆ ಇಲಾಖೆಯಲ್ಲಿ ಸಹಾಯಧನ ಸೌಲಭ್ಯ: ಅರ್ಜಿ ಆಹ್ವಾನ

Update: 2025-12-04 21:49 IST

ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ ಕೈಗೊಂಡ ರೈತರಿಗೆ ಶೇ.50ರ ಸಹಾಯಧನ, ಕೃಷಿ ಯಾಂತ್ರೀಕರಣ ಉಪಅಭಿಯಾನ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಗಳಡಿ ತೋಟಗಾರಿಕೆ ಯಾಂತ್ರಿಕರಣ ಕಾರ್ಯಕ್ರಮದಡಿ ಅನುಮೋದಿತ ಯಂತ್ರೋಪಕರಣಗಳಿಗೆ ಶೇ.40/50ರ ಸಹಾಯಧನ ಸಿಗಲಿದೆ.

ನೀರಿನ ಸಮರ್ಪಕ ಬಳಕೆಗಾಗಿ ಹನಿ ನೀರಾವರಿ/ತುಂತುರು ನೀರಾವರಿ ಅಳವಡಿಕೆಗೆ ಶೇ.90ರಷ್ಟು ಸಹಾಯಧನ ಲಭ್ಯವಿದೆ. ಸಹಾಯಧನ ಪಡೆಯಲು ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಕಾರ್ಯಾದೇಶ ಪಡೆದು ಇಲಾಖೆಯಿಂದ ಅನುಮೋದಿತ ಡೀಲರ್ ಗಳ ಮೂಲಕ ರೈತರು ಹನಿ ನೀರಾವರಿ ಅಳವಡಿಸಿಕೊಂಡು ಸಹಾಯಧನ ಪಡೆಯಬಹುದು.

ಭವಿಷ್ಯದ ಬೆಳೆಯಾದ ತಾಳೆ ಬೆಳೆಗಾಗಿ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಉಚಿತ ವಿತರಣೆಯೊಂದಿಗೆ 4 ವರ್ಷಗಳ ಕಾಲ ನಿರ್ವಹಣಾ ವೆಚ್ಚ ಪಾವತಿ ಹಾಗೂ ತಾಳೆ ಬೆಳೆ ಬೆಳೆಯುವ ರೈತರಿಗೆ ಬೋರ್ವೆಲ್, ಬಾವಿ ನಿರ್ಮಿಸಿಕೊಳ್ಳಲು, ವಿದ್ಯುತ್/ಡೀಸೆಲ್ ಪಂಪ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಹಾಗೂ ಮಹಾತ್ಮಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಹಾಗೂ ಪೌಷ್ಠಿಕ ತೋಟಗಳ ನಿರ್ಮಾಣಕ್ಕೆ ಅವಕಾಶವಿದೆ.

ಈ ಎಲ್ಲಾ ಯೋಜನೆಗಳ ಪ್ರಯೋಜನೆ ಪಡೆಯಲು ಆಸಕ್ತ ರೈತರು ಪ್ರಥಮ ಹಂತದಲ್ಲಿ ನೋಂದಣಿ ಅರ್ಜಿಯೊಂದಿಗೆ ಬೆಳೆ ನಮೂದಿಸಿರುವ ಇತ್ತೀಚಿನ ಪಹಣಿ ಪತ್ರ ಮತ್ತು ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬಹುದು. ಇಲಾಖಾ ಮಾರ್ಗಸೂಚಿಯಂತೆ ಅರ್ಜಿಗಳನ್ನು ಜೇಷ್ಠತೆಯ ಆಧಾರದಲ್ಲಿ ಇಲಾಖೆ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಸಹಾಯಧನಕ್ಕೆ ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಅಧಿಕಾರಿಗಳನ್ನು ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದುಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News