×
Ad

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆ

Update: 2023-11-16 19:24 IST

ಶಾಂತರಾಜ ಐತಾಳ್

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮುಂದಿನ ಡಿಸೆಂಬರ್ ೩೦ರ ಶನಿವಾರ ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮತಿ ಮಂಟಪದಲ್ಲಿ ನಡೆಯಲಿದೆ.

ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಸಂಘಟಕ, ವಿಮರ್ಶಕ, ಸಾಮಾಜಿಕ ಕಳಕಳಿಯ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಘೋಷಿಸಿದ್ದಾರೆ ಎಂದು ತಾಲೂಕು ಕಾರ್ಯದರ್ಶಿ ಜನಾರ್ದನ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News