×
Ad

ಉಡುಪಿ | ಡಿ.7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

Update: 2025-12-06 20:35 IST

ಸಾಂದರ್ಭಿಕ ಚಿತ್ರ

ಉಡುಪಿ, ಡಿ.6: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್‌ಟಿಇಟಿ) ಡಿ.7 ರವಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 12:00ಗಂಟೆಯವರೆಗೆ ಮತ್ತು ಅಪರಾಹ್ನ 2:00ರಿಂದ ಸಂಜೆ 4:30ರವರೆಗೆ ಜಿಲ್ಲೆಯ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಬೆಳಗ್ಗೆ ಏಳು ಪರೀಕ್ಷಾ ಕೇಂದ್ರಗಳಲ್ಲಿ 1,299 ಅಭ್ಯರ್ಥಿಗಳು ಮತ್ತು 16 ಪರೀಕ್ಷಾ ಕೇಂದ್ರಗಳಲ್ಲಿ 3,139 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಅವರ ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ ಹಂಚಿಕೆ ಮಾಡಲಾದ ಪರೀಕ್ಷೆ ಕೇಂದ್ರಗಳ ಲ್ಯಾಂಡ್ ಮಾರ್ಕ್ ಆಧರಿಸಿ ಪ್ರವೇಶ ಪತ್ರದೊಂದಿಗೆ ನಿಗದಿತ ಸಮಯದಲ್ಲಿ ಹಾಜರಾಗಬೇಕು. ಅಭ್ಯರ್ಥಿಗಳ ಮುಖ ಚಹರೆ ತಾಳೆ ನೋಡುವ ಕಾರ್ಯ ಪತ್ರಿಕೆ-1ಕ್ಕೆ ಬೆಳಗ್ಗೆ 7 ಗಂಟೆಗೆ ಮತ್ತು ಪತ್ರಿಕೆ-2ಕ್ಕೆ ಅಪರಾಹ್ನ 12:15ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಪ್ರಾರಂಭವಾಗಲಿದೆ.

ಅಭ್ಯರ್ಥಿಗಳಿಗೆ ನಿಯಮಗಳನ್ನು ಪ್ರವೇಶ ಪತ್ರದಲ್ಲಿ ಮುದ್ರಿಸಿದ್ದು, ಅಭ್ಯರ್ಥಿಗಳು ಅದನ್ನು ಓದಿಕೊಂಡು ಪಾಲಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News