×
Ad

ಉಡುಪಿ: ಆ. 5ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ

Update: 2023-08-04 20:36 IST

ಉಡುಪಿ, ಆ.4: ಇಂಧನ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಅಪರಾಹ್ನ 3:00 ಗಂಟೆಗೆ ನಗರದ ಕುಂಜಿಬೆಟ್ಟು ಕ.ವಿ.ಪ್ರ.ನಿ.ನಿ ನೌಕರರ ಸಂಘದ ಸಭಾಭವನದಲ್ಲಿ ಚಾಲನೆ ನೀಡಲಾಗುವುದು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಯೋಜನೆಗೆ ಚಾಲನೆ ನೀಡುವರು. ಜಿಲ್ಲೆಯ ಶಾಸಕರು, ಸಂಸದರು, ಜನಪ್ರತಿನಿಧಿಗಳು, ಗಣ್ಯರೊಂದಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಎಸ್ಪಿ ಅಕ್ಷಯ್ ಎಂ ಹಾಕೆ ಮತ್ತಿತರರು ಭಾಗವಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News