ಉಡುಪಿ| ಕಳವು ಪ್ರಕರಣ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
Update: 2026-02-02 21:20 IST
ಉಡುಪಿ: ಮಲ್ಪೆ ಬೀಚ್‌ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಶಾ ಸುಮಿತ್ರ ಕೃಷ್ಣ ಹಾಗೂ ರೇಖಾ ದಾನಪ್ಪ ಬಂಧಿತ ಆರೋಪಿಗಳು. ಇವರು ಮಲ್ಪೆ ಬೀಚ್‌ನಲ್ಲಿ ಕಳವು ಪ್ರಕರಣ ದಲ್ಲಿ ಭಾಗಿಯಾಗಿ ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಇವರನ್ನು ಮಲ್ಪೆ ಠಾಣಾ ಸಿಬ್ಬಂದಿ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರ ತಂಡ, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ.31ರಂದು ಬಂಧಿಸಿದೆ.
ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದರು. ಇವರನ್ನು ಮಂಗಳೂರು ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.