×
Ad

ಉಡುಪಿ|ಸಂಚಾರ ನಿಯಮ ಉಲ್ಲಂಘನೆ; 1,199 ಪ್ರಕರಣ ದಾಖಲು

ಹೊಸ ವರ್ಷಾಚರಣೆ, ಹಬ್ಬಗಳಿಗೆ ವಿಶೇಷ ಕಾರ್ಯಾಚರಣೆ

Update: 2026-01-01 17:19 IST

ಉಡುಪಿ, ಜ.1: ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದ್ದು, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 1,199 ಪ್ರಕರಣಗಳಲ್ಲಿ 9,62,400ರೂ. ದಂಡ ವಿಧಿಸಲಾಗಿದೆ.

ಡಿ.24ರಿಂದ ಡಿ.31ವರೆಗೆ ಹಮ್ಮಿಕೊಳ್ಳಲಾದ ಈ ವಿಶೇಷ ಕಾರ್ಯಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ಒಟ್ಟು 29 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಈ ವಿಶೇಷ ಕಾರ್ಯಾಚರಣೆಯಲ್ಲಿ 1,199 ಪ್ರಕರಣಗಳನ್ನು ದಾಖಲಿಸಿಕೊಂಡು 9,42,600 ರೂ. ದಂಡವನ್ನು ವಿಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಕುಡಿದು ವಾಹನ ಚಲಾಯಿಸಿದ 103, ಹೆಲ್ಮಟ್ ರಹಿತ ವಾಹನ ಸವಾರಿ ಮಾಡಿರುವ 803, ಸೀಟ್ ಬೇಲ್ಟ್ ಧರಿಸದೆ ವಾಹನ ಚಲಾಯಿಸಿದ 243, ಒಂದು ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡಿರುವ 35 ಹಾಗೂ ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ 15 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News