×
Ad

ಉಡುಪಿ: ಪೋಕ್ಸೊ ಪ್ರಕರಣದ ಆರೋಪಿಗಳಿಬ್ಬರು ದೋಷಮುಕ್ತ

Update: 2023-09-01 20:19 IST

ಉಡುಪಿ, ಸೆ.1: ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಇಂದು ದೋಷಮುಕ್ತಗೊಳಿಸಿ ಆದೇಶಿಸಿದೆ.

ಉದ್ಯಾವರದ ಗುಡ್ಡೆಯಂದಡಿ ನಿವಾಸಿ ಸುರ್ಫುದ್ದೀನ್ ಮತ್ತು ಅವರ ಸಹೋದರಿ ಶಬ್ನಾಝ್ ಖುಲಾಸೆಗೊಂಡ ಆರೋಪಿಗಳು.

ಸರ್ಫುದ್ದೀನ್ ತನ್ನ ಸಹೋದರಿಯ 17 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಸಂತ್ರಸ್ತೆಯ ಚಿಕ್ಕಮ್ಮ 2020ರ ನ.5ರಂದು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸರ್ಫುದ್ಧೀನ್‌ನನ್ನು ಬಂಧಿಸಿದರು. ಈ ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಶಬ್ನಾಝ್ ಎಂಬಾಕೆಯನ್ನು ಪೊಲೀಸರು ಬಳಿಕ ಬಂಧಿಸಿದರು.

ತನಿಖೆ ನಡೆಸಿದ ಪೊಲೀಸರು 2021ರ ಜ.2ರಂದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳ ಮೇಲಿನ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯುಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಇಬ್ಬರು ಆರೋಪಿ ಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದರು.

ಸರ್ಫುದ್ದೀನ್ ಪರ ವಕೀಲ ದಿನೇಶ್ ಹೆಗ್ಡೆ ಉಳ್ಳೆಪಾಡಿ ಹಾಗೂ ಶಬ್ನಾಝ್ ಪರ ವಕೀಲ ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News