ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭಾರತದ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ರವಿವಾರ ಬೆಳಗ್ಗೆ ಭೇಟಿ ನೀಡಿ ಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಉಡುಪಿ ಬಿಜೆಪಿಯ ಮಧುಕರ್ ಮುದ್ರಾಡಿ , ಜೆಡಿಎಸ್ ಮುಖಂಡರಾದ ವಾಸುದೇವ ರಾವ್, ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಸುದರ್ಶನ್ ಭಟ್ ಕಲ್ಯ ಉಪಸ್ಥಿತರಿದ್ದರು.