ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭಾರತದ ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ಭೇಟಿ ನೀಡಿದರು.

ಸೋದೆ ಮಠದ ಬಾಳೆಮುಹೂರ್ತ ಹಾಗೂ ಈ ಪ್ರಯುಕ್ತ ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾಳೆ ಮೇಳ ‘ಕದಳೀ ವಿಶ್ವದರ್ಶನ’ ದಲ್ಲಿ ಭಾಗವಹಿಸಲು ಆಗಮಿಸಿದ್ದ ಕುಮಾರಸ್ವಾಮಿ, ಕೃಷ್ಣಮಠದಲ್ಲಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆ ಪಡೆದುಕೊಂಡರು.

ಶೀರೂರು ಮಠದ ದಿವಾನರಾದ ಉದಯಕುಮಾರ ಸರಳತ್ತಾಯ, ಪಾರುಪತ್ಯೆದಾರರಾದ ಸುದರ್ಶನ್ ಭಟ್ ಕಲ್ಯ, ಉಡುಪಿ ಶಾಸಕ ಯಶಪಾಲ್ ಸುವರ್ಣ, ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹಲವು ಮುಖಂಡರು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಬಿ.ಬಿ ಶೆಟ್ಟಿಗಾರ್‌/ವಾರ್ತಾಭಾರತಿ

contributor