ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಕಾಲೇಜು ಆಡಳಿತ ಮಂಡಳಿಗೂ ಷರತ್ತುಬದ್ಧ ಜಾಮೀನು ಮಂಜೂರು
Update: 2023-07-28 18:14 IST
ಉಡುಪಿ: ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಕಾಲೇಜು ಆಡಳಿತ ಮಂಡಳಿಗೂ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ವಿದ್ಯಾರ್ಥಿಯರ ಜೊತೆ ಆಡಳಿತ ಮಂಡಳಿ ವಿರುದ್ಧವೂ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್ ಇಂದು ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ರಶ್ಮಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಆರೋಪಿಪರ ಉಡುಪಿಯ ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ವಾದಿಸಿದ್ದಾರೆ.