ಉಡುಪಿ | ಡಿ.12ರಂದು ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ !
Update: 2025-12-09 22:04 IST
ಸಾಂದರ್ಭಿಕ ಚಿತ್ರ PC: istockphoto
ಉಡುಪಿ, ಡಿ.9 : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯರಾದ ಮಲ್ಲೇಶ್ವರಿ ಅವರ ವಿವಾಹವು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ಬಪ್ಪನಾಡು ನಿವಾಸಿ ಸತೀಶ್ ಪ್ರಭು ಅವರ ಪುತ್ರ ಸಂಜಯ ಪ್ರಭು ಅವರೊಂದಿಗೆ ಹಾಗೂ ಸುಶೀಲಾ ಅವರ ವಿವಾಹವು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕು ಕೃಷ್ಣಾಪುರ ಗ್ರಾಮದ ಮಲ್ಲಪ್ಪ ಅವರ ಪುತ್ರ ನಾಗರಾಜ ಅವರೊಂದಿಗೆ ಡಿಸೆಂಬರ್ 12ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ನಿಟ್ಟೂರಿನಲ್ಲಿರುವ ಸರಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.