×
Ad

ಉಡುಪಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Update: 2023-09-26 20:27 IST

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ವರ್ಧೆಗೆ ಚಪ್ಪಾಳೆ ತಟ್ಟುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ., ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರಾಮದಾಸ್ ಕೆ.ಜಿ. ಉಪಸ್ಥಿತರಿದ್ದರು.

ಜಿಲ್ಲೆಯ ೮೫ಕ್ಕೂ ಅಧಿಕ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News