×
Ad

Udupi | ಯುವಕ ನಾಪತ್ತೆ

Update: 2026-06-08 20:52 IST

ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷ್ಮೀಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಮನೋಜ್ (20) ಎಂಬ ಯುವಕ ಮೇ 18ರಂದು ರಾತ್ರಿ 11ರ ಸುಮಾರಿಗೆ ವಿಪರೀತ ಮದ್ಯಪಾನ ಮಾಡಿ, ಗಲಾಟೆ ಮಾಡುತ್ತಿದ್ದು, ಪೋಷಕರೊಂದಿಗೆ ಮನೆಗೆ ಹೋಗಲು ನಿರಾಕರಿಸಿ, ಓಡಿಹೋಗಿದ್ದಾರೆ. ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ, ಸ್ನೇಹಿತ ರನ್ನು ವಿಚಾರಿಸಿದರೂ ಇದುವರೆಗೂ ಪತ್ತೆಯಾಗಿಲ್ಲ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ನೇಪಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475, 8277988945 ಹಾಗೂ ಮಣಿಪಾಲ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2526444ಅನ್ನು ಸಂಪರ್ಕಿಸಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News