ಪಟ್ಲಬೈಲು ನಿರ್ಮಾಣ ಹಂತದ ಸೇತುವೆ ಕುಸಿತ; ರಸ್ತೆ ಸಂಪರ್ಕ ಕಡಿತ
ಉಡುಪಿ: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಆತ್ರಾಡಿ- ಬಜ್ಪೆ ವಿಮಾನ ನಿಲ್ದಾಣದ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿನ ಸೇತುವೆ ಕುಸಿದು ಬಿದ್ದು ಸಂಪರ್ಕ ಕಡಿತವಾಗಿರುವ ಬಗ್ಗೆ ವರದಿಯಾಗಿದೆ.
ಹಿರೇಬೆಟ್ಟು ಗ್ರಾಮದ ಪಟ್ಲಬೈಲು ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿರುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಹೋಗಲು ಹಾಗೂ ಸಾರ್ವಜನಿಕರು ಕೆಲಸ ಕಾರ್ಯಗಳಿಗೆ ಮತ್ತು ದಿನನಿತ್ಯದ ವಹಿವಾಟುಗಳಿಗೆ ತೆರಳಲು ಸುತ್ತು ಬಳಸಿ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದು ಪ್ರಮುಖ ರಸ್ತೆಯಾಗಿದ್ದು, ಇಲ್ಲಿ ಕುಸಿದ ಸೇತುವೆಯ ಭಾಗದ ಪುನರ್ ನಿರ್ಮಾಣ ಕಾಮಗಾರಿ ತೀರಾ ಮಂದಗತಿಯಲ್ಲಿ ನಡೆಯುತ್ತಿದೆ.ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ ೨೬ ಬೆಳಿಗ್ಗೆ ೧೦ಗಂಟೆಗೆ ಸ್ಥಳೀಯ ಗ್ರಾಮಸ್ಥರು ಕಾಮಗಾರಿ ನಡೆಯುತ್ತಿರುವ ಹಿರೇಬೆಟ್ಟು ಗ್ರಾಪಂನ ಪಟ್ಲಬೈಲು ಪ್ರದೇಶದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.