×
Ad

ಮೀನುಗಾರರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Update: 2025-07-24 19:36 IST

ಉಡುಪಿ, ಜು.24: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆ ಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಕ್ಕೆ ಅರ್ಹ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಲ್ಲದೇ ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ/ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕ ವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News