ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ
Update: 2026-05-17 14:40 IST
ಉಡುಪಿ, ಮೇ 17: ಎಂಆರ್‌ಪಿಎಲ್‌ನ ಸಿಎಸ್‌ಆರ್ ನಿಧಿಯಿಂದ ಅರೋಗ್ಯ ಇಲಾಖೆಗೆ ನೀಡಲಾದ ವಾಹನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳಕರ್ ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್, ಡಿಎಚ್‌ಓ ಡಾ.ಬಸವರಾಜ್ ಹುಬ್ಬಳ್ಳಿ, ಎಂಆರ್‌ಪಿಎಲ್ ಸಂಸ್ಥೆಯ ಚೀಫ್ ಜನರಲ್ ಮ್ಯಾನೇಜರ್ ಬಿ.ಪ್ರಶಾಂತ್ ಬಾಳಿಗ ಮೊದಲಾದವರು ಉಪಸ್ಥಿತರಿದ್ದರು.