×
Ad

ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಡಿಸಿಗೆ ಮನವಿ

Update: 2025-03-24 20:28 IST

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಆರೋಪಿಗಳ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂತ್ರಸ್ತೆ ಲಕ್ಕವ್ವ ಬಾ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.

ಸಮುದಾಯದವರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ಅವರು ತಿಳಿಸಿದ್ದಾರೆ.

ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಂಜಾರ ಸಮುದಾಯದ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಜಯಸಿಂಹ, ಬಂಜಾರ ಸಮುದಾಯದ ಸ್ಥಳೀಯ ಮುಖಂಡ ಮಂಜುನಾಥ ಚೌಹಾಣ್ ಮೊದ ಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News