×
Ad

ವಿಡಿಯೋ ವಿವಾದ: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ

Update: 2023-07-29 19:41 IST

ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಜು.27ರಂದು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಉಡುಪಿ ಎಬಿವಿಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹೇಳಿಕೆಯನ್ನು ನೀಡಿದ್ದರು. ಇದೇ ಕಾರಣಕ್ಕಾಗಿ ಜು.28ರಂದು ಸಾಮಾಜಿಕ ಜಾಲತಾಣವಾದ ಇನ್ಟಾಗ್ರಾಮ್ ನಲ್ಲಿ ಜಿಗರ್ ಕೋಬ್ರಾ ಎಂಬ ಇನ್ಟಾಗ್ರಾಮ್ ಖಾತೆದಾರ ವಿದ್ಯಾರ್ಥಿನಿಯನ್ನು ಫಾಲೋ ಮಾಡಿ, ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಈ ಮೂಲಕ ವಿದ್ಯಾರ್ಥಿನಿಯ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಿರುವು ದಾಗಿ ದೂರಲಾಗಿದೆ.

ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News