×
Ad

ಕಾಪು ಕ್ಷೇತ್ರದ ಗ್ರಾಪಂ ಅಭಿವೃದ್ಧಿ ಕಾರ್ಯಕ್ರಮಗಳ ಸಭೆ

Update: 2023-08-02 21:19 IST

ಉಡುಪಿ, ಆ.2: ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಸಭೆಯು ಇಂದು ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸ್ವಚ್ಛ ಭಾರತ್ ಮಿಷನ್, ನರೇಗಾ ಯೋಜನೆ, ಜಲ ಜೀವನ್ ಮಿಷನ್, 14 ಮತ್ತು 15 ನೇ ಹಣಕಾಸು ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಆಯುಷ್ ಚಿಕಿತ್ಸಾಲಯ, ಪಶು ಚಿಕಿತ್ಸಾಲಯ, ಕೃಷಿ ಸಂಬಂಧಿತ ಯೋಜನೆಗಳು, ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯ, ಅಂಗನವಾಡಿ ಕೇಂದ್ರ, ಕೊರಗ ಸಮುದಾಯದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳು, ಹಾಗೂ ಸಂಪನ್ಮೂಲ ಕ್ರೋಢೀಕರಣ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಮುಖ್ಯ ಯೋಜನಾಧಿ ಕಾರಿಗಳಾದ ಶ್ರೀನಿವಾಸ್ ರಾವ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News