×
Ad

ದೊಡ್ಡ ಮಟ್ಟದ ಸಮಾರಂಭದಲ್ಲಿ ಕಾಂಗ್ರೆಸ್ ಸೇರುತ್ತೇನೆ: ಸುಕುಮಾರ್ ಶೆಟ್ಟಿ

Update: 2023-09-07 19:13 IST

ಕುಂದಾಪುರ, ಸೆ.7: ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಶೃಂಗೇರಿ ಶಾಸಕರ ಜೊತೆಗೆ ಡಿಕೆಶಿ ಭೇಟಿಯಾಗಿದ್ದೇನೆ. ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಅವರಿಗೆ ಕಾಂಗ್ರೆಸ್ ಸೇರುತ್ತೇನೆಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದೇನೆ. ದೊಡ್ಡ ಮಟ್ಟದಲ್ಲಿ ಸಮಾರಂಭ ಮಾಡಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಬೈಂದೂರಿನ ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ವಂಡ್ಸೆ ಸಮೀಪದ ನೆಂಪುವಿನ ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮದ ವರೊಂದಿಗೆ ಮಾತನಾಡಿದ ಅವರು, ಬೆಳೆ ಯುವ ನಾಯಕರ ಕಾಲೆಳೆಯುವುದು ಬಿಜೆಪಿಯ ಪರಿಪಾಠ. ಕಳೆದ ಚುನಾವಣೆಯಲ್ಲಿ ಕಾರಣಗಳಿಲ್ಲದೇ ನನಗೆ ಸೀಟನ್ನು ನಿರಾಕರಿಸಿ ದರು. ಬೈಂದೂರಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನನ್ನನ್ನು ಮೂಲೆ ಗುಂಪು ಮಾಡಿದರು. ಇದರಿಂದ ಮಾನಸಿಕವಾಗಿ ನೊಂದಿದ್ದೇನೆ. ಮನಸ್ಸಿಗೆ ಆಘಾತವಾಗಿದೆ ಎಂದರು.

ಬಿಜೆಪಿಗೆ ಇನ್ನೂ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ. ಬಿಜೆಪಿಯವರಿಂದ ಏನೂ ಮಾಡಲು ಆಗುವುದಿಲ್ಲ. ಜನಮನವನ್ನು ಗೆಲ್ಲಲು ಸಾಧ್ಯವಿಲ್ಲ. ಕರಾವಳಿ ಬಿಟ್ಟರೆ ಬೇರೆಲ್ಲೆಡೆ ಬಿಜೆಪಿ ತನ್ನ ಹೆಸರನ್ನು ಹಾಳು ಮಾಡಿಕೊಂಡಿದೆ. ಇನ್ನು ಮುಂದೆ ಇಂತಹ ಪಕ್ಷದ ನಾಯಕ ನಾಗಿ ನಾನು ಇರುವುದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ ಎಂದು ಅವರು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News