ಬಾವಿಗೆ ಬಿದ್ದು ಮಹಿಳೆ ಮೃತ್ಯು
Update: 2025-08-17 21:59 IST
ಕಾರ್ಕಳ, ಆ.17: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಬೆಳ್ಮಣ್ ಗ್ರಾಮದ ದೇವಸ್ಯ ಕೆಳಗಿನ ಮನೆ ನಿವಾಸಿ ಫ್ರೋರಿನ್ ಮಥಾಯಸ್(71) ಎಂಬವರು ಆ.17ರಂದು ಬೆಳಗಿನ ಜಾವ ಮನೆಯ ಅಂಗಳದಲ್ಲಿ ವಾಕಿಂಗ್ ಮಾಡುವಾಗ ಸಮೀಪದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.