ಬೆಂಗಳೂರು, ಬಾಣಸವಾಡಿ ರೈಲು ನಿಲ್ದಾಣಗಳಲ್ಲಿ ಕಾಮಗಾರಿ: ಕರಾವಳಿಯ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಉಡುಪಿ, ಡಿ.20: ಪಶ್ಚಿಮ ರೈಲ್ವೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಹಾಗೂ ಬಾಣಸವಾಡಿ ನಿಲ್ದಾಣಗಳಲ್ಲಿ ಹೆಚ್ಚುವರಿ ಸಿಗ್ನಲ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಹಾಗೂ ಕೆಲವು ರೈಲುಗಳ ಸಂಚಾರ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
2026ರ ಜ.3ರ ರೈಲು ನಂ.16586 ಮುರ್ಡೇಶ್ವರ- ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಂಚರಿಸುವ ರೈಲಿನ ಸಂಚಾರವನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲೇ ತಡೆ ಹಿಡಿಯ ಲಾಗುವುದು.
ಜ.4ರ ರೈಲು ನಂ.16511 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಹಾಗೂ ಕಣ್ಣೂರು ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಹಾಗೂ ಯಶವಂತಪುರ ಜಂಕ್ಷನ್ ನಡುವಿನ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಜ.3ರ ರೈಲು ನಂ.16512 ಕಣ್ಣೂರು- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಯಶವಂತಪುರ ಜಂಕ್ಷನ್ ಹಾಗೂ ಸರ್ ಎಂ.ವಿಶ್ವೇಶ್ವರ‌್ಯ ಟರ್ಮಿನಲ್ ನಡುವೆ ಭಾಗಶ: ರದ್ದು ಪಡಿಸಲಾಗಿದೆ.
ಜ.4ರ ರೈಲು ನಂ.16585 ಬೆಂಗಳೂರು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್- ಮುರ್ಡೇಶ್ವರ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬದಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಪ್ರಾರಂಭಿಸಲಾಗುವುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.