ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಕಾರ್ಮಿಕ ಮೃತ್ಯು
ಹಿರಿಯಡ್ಕ, ಡಿ.19: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮದಗ ಶೇಡಿಗುಡ್ಡೆ, ಹತ್ತಿರ ಬಳಿ ನಡೆದಿದೆ.
ಮೃತರನ್ನು ಸಲೀಂ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ ಕಾರ್ಮಿಕ ಗೋವಾರ್ಧನ ಬೀಮ್ ಮಂಡಲ್ ಎಂಬವರು ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿ.18ರಂದು ಸಂಜೆ ವೇಳೆ ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕೆಲಸ ಮುಗಿಸಿ ಅತ್ರಾಡಿಯಿಂದ ಪೆರ್ಣಂಕಿಲಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ಸಲೀಂ ಮತ್ತು ಗೋವಾರ್ಧನ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ಇಬ್ಬರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಸಲಾಗಿತ್ತು. ಇವರಲ್ಲಿ ಗಂಬೀರವಾಗಿ ಗಾಯಗೊಂಡ ಸಲೀಂ ಚಿಕಿತ್ಸೆ ಫಲಕಾರಿಯಾಗದೆ ಡಿ.19ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.