×
Ad

ವಿಶ್ವ ಸ್ತನ್ಯಪಾನ ಸಪ್ತಾಹ: ಮಾಹಿತಿ ಕಾರ್ಯಗಾರ

Update: 2023-08-21 20:59 IST

ಉಡುಪಿ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಆರ್‌ಸಿಸಿ ಮೂಡಗಿಳಿಯಾರು, ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಗಿಳಿಯಾರು ಸರಕಾರಿ ಸಂಯುಕ್ತ ಪ್ರೌಢಶಾಲೆ ವಠಾರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಾಹಿತಿ ಕಾರ್ಯಗಾರ ಇತ್ತೀಚೆಗೆ ನಡೆಯಿತು.

ಸಮುದಾಯ ಆರೋಗ್ಯ ಕೇಂದ್ರ ಕೋಟದ ಆಡಳಿತ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿ, ವಿಷ ಯದ ಕುರಿತು ಮಾಹಿತಿ ನೀಡಿದರು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವರಾಮ ಭಟ್, ಆರ್‌ಸಿಸಿ ಮೂಡಗಿಳಿಯಾರು ಉಪಾಧ್ಯಕ್ಷ ವಿಜಯಕುಮಾರ್, ಸರಕಾರಿ ಹಿರಿಯ ಪ್ರಾಥುಕ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಕಾರ್ಯದರ್ಶಿ ತಿಮ್ಮ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಹರಿಶ್ಚಂದ್ರ ನಾಯಕ ಸ್ವಾಗತಿಸಿ, ಸಮುದಾಯ ಆರೋಗ್ಯ ಅಧಿಕಾರಿ ವಾರಿಜ ಕಾರ್ಯಕ್ರಮ ನಿರೂಪಿಸಿದರು. ವೃಂದಾ ನಾಯ್ಕ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News