×
Ad

ಕುಸ್ತಿ ಪಂದ್ಯಾಟ: ಮುಳೂರು ಅಲ್‌ಇಹ್ಸಾನ್ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Update: 2024-08-16 17:50 IST

ಕಾಪು, ಆ.16: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎರ್ಮಾಳ್ ತೆಂಕ ಕಿನಾರ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ನಡೆದ ಉಡುಪಿ ವಲಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅಧೀನ ಸಂಸ್ಥೆ ಮುಳೂರು ಅಲ್-ಇಹ್ಸಾನ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಪ್ರೊ.ಯೂಸುಫ್, ಶಾಲಾ ಪ್ರಾಂಶುಪಾಲ ಹಬೀಬು ರಹಮಾನ್ ಕೆ.ಎಸ್, ಉಪ ಪ್ರಾಂಶುಪಾಲೆ ಆಫ್ರಿನ್ ತಬ್ರೇಝ್ ಖಾನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಶಬನ ಸೈಯದ್, ದೈಹಿಕ ಶಿಕ್ಷಣ ಶಿಕ್ಷಕರಾದ ಬಶೀರ್ ಎಂ., ಸದ್ದಾಮ್ ಹುಸೇನ್ ಮತ್ತು ಸುಮನ ಕಿಶೋರ್ ವಿದ್ಯಾರ್ಥಿಗಳೊಂದಿಗೆ ಚಿತ್ರದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News